Top

ರಾಜ್ಯ ಸ್ಥಳೀಯ ಸಂಸ್ಧೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌.!!

ರಾಜ್ಯ ಸ್ಥಳೀಯ ಸಂಸ್ಧೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌.!!
X

ಬೆಂಗಳೂರು : ರಾಜ್ಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರ ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ, 108 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಾಗಿತ್ತು. ಆದರೇ ಮೂರು ನಗರಪಾಲಿಕೆಗಳ ಕುರಿತು ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಹೀಗಾಗಿ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊರತು ಪಡಿಸಿ, 105 ಸ್ಥಳೀಯ ಸಂಸ್ಥೆಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದರು.

29 ನಗರ ಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಚುನಾವಣೆಯ ಬಗ್ಗೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಚುನಾವಣಾ ದಿನಾಂಕ ಹೀಗಿದೆ..

  1. ಆಯಾ ಜಿಲ್ಲಾಧಿಕಾರಿಗಳು 10-8-2018ರಿಂದ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ.
  2. 17-8-18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
  3. 18-8-18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
  4. 20-8-18ರಂದು ಉಮೇದುವಾರಿಕೆ ವಾಪಾಸು ಪಡೆಯಲು ಕಡೆಯ ದಿನ.
  5. 29-8-18ರಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ಮತದಾನ ನಡೆಯಲಿದೆ.
  6. ಮರು ಮತದಾನ ಅವಶ್ಯಕತೆ ಇದ್ದಲ್ಲಿ 31-8-18ರಂದು ನಡೆಯಲಿದೆ.
  7. 1-9-18ರಂದು ಮತ ಏಣಿಕೆ
  8. 1-9-18ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯ

ಅಭ್ಯರ್ಥಿಗಳಿಗೆ ವೆಚ್ಚಮಿತಿ ಈ ಕೆಳಗಿನಂತಿದೆ

  • ನಗರಸಭೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ 2 ಲಕ್ಷ
  • ಪುರಸಭೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ 1 ಲಕ್ಷದ 50 ಸಾವಿರ
  • ಪಟ್ಟಣಪಂಚಾಯ್ತಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ 1 ಲಕ್ಷ

ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಇವಿಎಂ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ನೋಟವನ್ನು ಪರಿಚಯಿಸಲಾಗುತ್ತಿದೆ.

ಸ್ಥಳೀಯ ಸಂಸ್ಥೆಗಳಿಗೆ ಬಿಗಿ ಭದ್ರತೆಗಾಗಿ ಕ್ರಮ

ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆಯಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚೆ ನಡೆಸಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದ್ದಾರೆ.

ಚುನಾವಣಾ ಕಾರ್ಯಕ್ಕಾಗಿ 7 ಐಎಎಸ್ ಅಧಿಕಾರಿ ವಿಶೇಷ ವೀಕ್ಷಕರಾಗಿ ನೇಮಕ ಮಾಡಲಾಗಿದೆ. 25 ಹಿರಿಯ ಕೆಎಎಸ್ ಅಧಿಕಾರಿಗಳು ಸಾಮಾನ್ಯ ವೀಕ್ಷಕರು ನೇಮಿಸಲಾಗಿದೆ. 30 ಜನರ ಕರ್ನಾಟಕ ರಾಜ್ಯ ಲೆಕ್ಕಪತ್ರ ನಿಯಂತ್ರಕರು ವೆಚ್ಚ ವೀಕ್ಷಕರಾಗಿ ನೇಮಕ ಮಾಡಲಾಗಿದೆ. 36 ಸಾವಿರದಿಂದ 46 ಸಾವಿರ ಸಿಬ್ಬಂದಿ ಚುನಾವಣೆಗೆ ತೊಡಗಿಸಿಕೊಂಡಿರುತ್ತಾರೆ ಎಂದು ತಿಳಿಸಿದರು.

ಮೂರು ನಗರಪಾಲಿಕೆಗಳಿಗೆ ಚುನಾವಣೆ ಎರಡನೇ ಹಂತದಲ್ಲಿ..

ಇನ್ನೂ ಶಿವಮೊಗ್ಗ, ಮೈಸೂರು, ತುಮಕೂರು ನಗರ ಪಾಲಿಕೆಗೆಳಿಗೆ ಸಂಬಂಧಿಸಿದ ಹಾಗೇ ಹೈಕೋರ್ಟ್‌ ಮುಂದೆ ವಾರ್ಡ್‌ ರಚನೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ರಿಚ್‌ ಅರ್ಜಿ ಇರೋದ್ರಿಂದ ಎರಡನೇಯ ಹಂತದಲ್ಲಿ ಚುನಾವಣೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದ್ದಾರೆ.

ಈ ಸಂಬಂಧ ಇಂದಿನಿಂದಲೇ ಆಯಾ ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಈ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.

Next Story

RELATED STORIES