Top

ಪ್ರಧಾನಿ ಅಭ್ಯರ್ಥಿ ಘೋಷಿಸದೇ ಇರಲು ಕಾಂಗ್ರೆಸ್ ತೀರ್ಮಾನ

ಪ್ರಧಾನಿ ಅಭ್ಯರ್ಥಿ ಘೋಷಿಸದೇ ಇರಲು ಕಾಂಗ್ರೆಸ್ ತೀರ್ಮಾನ
X

ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯತಂತ್ರವನ್ನು ಪ್ರಕಟಿಸದೇ ಕಾದು ನೋಡುವ ತಂತ್ರ ಅನುಸರಿಸಲು ನಿರ್ಧರಿಸಿರುವ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸದೇ ಇರಲು ತೀರ್ಮಾನಿಸಿದೆ.

ದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯಗಳಲ್ಲಿ ಯಾವ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದನ್ನು ಸ್ಥಳೀಯ ರಾಜ್ಯದ ಮುಖಂಡರಿಗೆ ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗಿನ ಹೊಂದಾಣಿಕೆ ಕುರಿತು ರಾಜ್ಯದ ಮುಖಂಡರಿಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್​, ಮಹಾರಾಷ್ಟ್ರದಲ್ಲಿ ಶಿವಸೇನಾ ಜೊತೆ ಹೊಂದಾಣಿಕೆಯ ಪ್ರಸ್ತಾಪ ಮುಂದೆ ಬಂದಿಲ್ಲ ಎಂದು ತಿಳಿಸಿದೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲಾ ಮುಖಂಡರು ರಾಹುಲ್ ಗಾಂಧಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲು ಒಲವು ತೋರಿದರು. ಆದರೆ ಅಂತಿಮವಾಗಿ ಚುನಾವಣಾ ಫಲಿತಾಂಶ ಹೊರಬೀಳುವವರೆಗೂ ಪ್ರಧಾನಿ ಅಭ್ಯರ್ಥಿ ಘೋಷಿಸದೇ ಇರಲು ಒಮ್ಮತ ವ್ಯಕ್ತವಾಯಿತು.

Next Story

RELATED STORIES