ರೈಲು ಸಂಚಾರ ಸ್ಥಗಿತ, ಪ್ರಯಾಣಿಕರಿಂದ ಕಲ್ಲು ತೂರಾಟ

X
TV5 Kannada5 Aug 2018 5:11 AM GMT
ತುಮಕೂರು: ತುಮಕೂರಿನಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡು, ಪ್ರಯಾಣಿಕರು ರೊಚ್ಚಿಗೆದ್ದ ಘಟನೆ ನಡೆದಿದೆ. ತುಮಕೂರಿನ ಮಲ್ಲಸಂದ್ರ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು_ ಅರಸೀಕೆರೆ ಪ್ಯಾಸೆಂಜರ್ ರೈಲ್ವೇ ಮೇಲೆ ಕಲ್ಲು ತೂರಾಟ ನಡೆದಿದೆ.
ಮತ್ತೊಂದು ರೈಲ್ ಕ್ರಾಸಿಂಗ್ ಗಾಗಿ ಎರಡು ಗಂಟೆಗಳ ಕಾಲ ಮಲ್ಲಸಂದ್ರ ನಿಲ್ದಾಣದಲ್ಲಿ ಅರಸೀಕೆರೆ ಪ್ಯಾಸೆಂಜರ್ ಸ್ಥಗಿತಗೊಂಡಿದ್ದು, ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ಪರೀಕ್ಷೆಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು ಪರದಾಡುವಂತಾಯಿತು. ಇನ್ನು ಸ್ಥಳಕ್ಕೆ ತುಮಕೂರು ಗ್ರಾಮಾಂತರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು.
Next Story