Top

ವಿಶ್ವನಾಥ್​ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ

ವಿಶ್ವನಾಥ್​ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ
X

ಜಾತ್ಯತೀತ ಜನತಾದಳದ ನೂತನ ರಾಜ್ಯಾಧ್ಯಕ್ಷರಾಗಿ ಎಚ್​.ವಿಶ್ವನಾಥ್ ಅವರನ್ನು ಅಯ್ಕೆ ಮಾಡಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ. ದೇವೇಗೌಡ ಘೋಷಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮೇಲಿದ್ದ ಎರಡೆರಡು ಜವಾಬ್ದಾರಿ ಇಳಿಸಲಾಗಿದೆ.

ಇತ್ತೀಚೆಗಷ್ಟೇ ಮೈಸೂರು ಜಿಲ್ಲಾ ಉಸ್ತುವಾರಿಯನ್ನಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜಯ ಗಳಿಸಿದ ಜಿ.ಟಿ. ದೇವೇಗೌಡರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ ಬೆನ್ನಲ್ಲೇ ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ಮೈಸೂರು ಭಾಗದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳಲು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ಈ ಹಿಂದೆ ಎಂ.ಪಿ. ಪ್ರಕಾಶ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ವಿಶ್ವನಾಥ್ ಅವರನ್ನು ಆಯ್ಕೆ ಮಾಡಿದ್ದೇವೆ. ಕುಮಾರಸ್ವಾಮಿ ಮೇಲೆ ಎರಡು ಮಹತ್ವದ ಜವಾಬ್ದಾರಿ ಇತ್ತು. ಆದ್ದರಿಂದ ರಾಜ್ಯಾಧ್ಯಕ್ಷ ಹುದ್ದೆಯಿಂದ ದೂರ ಸರಿಯುವ ಇಂಗಿತ ವ್ಯಕ್ತಪಡಿಸಿದ್ದರು ಎಂದರು.

ಜೆಡಿಎಸ್ ಕುಟುಂಬ ರಾಜಕಾರಣದಿಂದ ಹೊರಬರಲು ಕ್ರಮ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿಯೇ ಪ್ರಜ್ವಲ್ ರೇವಣ್ಣ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಮುಂದಿನ ದಿನಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ದೇವೇಗೌಡ ನುಡಿದರು.

Next Story

RELATED STORIES