ಮೂರು ನಗರ ಪಾಲಿಕೆಗಳ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ಶಿವಮೊಗ್ಗ, ಮೈಸೂರು, ತುಮಕೂರು ನಗರ ಪಾಲಿಕೆಗೆಳ ಚುನಾವಣೆಗೆ ಸಂಬಂಧಿಸಿದ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಸಂಬಂಧ ವಾರ್ಡ್ ರಚನೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸುವ ಮೂಲಕ, ಮೂರು ನಗರ ಪಾಲಿಕೆಗಳ ಚುನಾವಣೆಗೆ ಇದ್ದ ತಡೆಯನ್ನು ತೆರವು ಗೊಳಿಸಿದೆ.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಮೂರ್ತಿ ಬಿ.ವೀರಪ್ಪ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ, ಕ್ಷೇತ್ರ ಮರುವಿಂಗಡನೆ ರಿಟ್ ಅರ್ಜಿಯನ್ನು ವಜಾಗೊಳಿಸಿದರು. ಈ ಮೂಲಕ ಶಿವಮೊಗ್ಗ, ತುಮಕೂರು ಹಾಗೂ ಮೈಸೂರು ನಗರ ಪಾಲಿಕೆಗಳಿಗೆ ಇದ್ದ ಅಡ್ಡಿಯನ್ನು ದೂರಮಾಡಿದೆ.
ಇದೇ ತಿಂಗಳ ಆ.2ರಂದು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ದಿನಾಂಕವನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಘೋಷಣೆ ಮಾಡಿದ್ದರು.
ಒಟ್ಟು 128 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 125 ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿತ್ತು.
ನಾಳೆಯಿಂದ ಆ.10ರಿಂದ 29 ನಗರ ಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ.
ಆದರೇ ಶಿವಮೊಗ್ಗ, ಮೈಸೂರು, ತುಮಕೂರು ನಗರ ಪಾಲಿಕೆಗೆಳಿಗೆ ಸಂಬಂಧಿಸಿದ ಹೈಕೋರ್ಟ್ ಮುಂದೆ ವಾರ್ಡ್ ರಚನೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ರಿಚ್ ಅರ್ಜಿ ಸಲ್ಲಿಕೆಯಾಗಿತ್ತು.
ಇಂತಹ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಇದೀಗ ಮೂರು ನಗರ ಪಾಲಿಕೆಗಳ ಚುನಾವಣೆಗೆ ಹಸಿರು ನಿಶಾನೆ ತೋರಿ, ರಾಜ್ಯ ಚುನಾವಣಾ ಆಯೋಗಕ್ಕೆ, ಚುನಾವಣೆ ನಡೆಸಲು ಅನುವು ಮಾಡಿಕೊಟ್ಟಿದೆ.