Top

ಲೋಕಸಭಾ ಚುನಾವಣೆ: ಬೀದರ್​ನಿಂದ ರಾಹುಲ್ ಗಾಂಧಿ ಸ್ಪರ್ಧೆ?

ಲೋಕಸಭಾ ಚುನಾವಣೆ: ಬೀದರ್​ನಿಂದ ರಾಹುಲ್ ಗಾಂಧಿ ಸ್ಪರ್ಧೆ?
X

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ವದಂತಿಗಳು ಹರಡಿವೆ.

ಹೈದರಬಾಬಾದ್​- ಕರ್ನಾಟಕ ಭಾಗವಾದ ಬೀದರ್​ನಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿ ಎಂದು ಸ್ಥಳೀಯ ಮುಖಂಡರು ಒತ್ತಡ ಹೇರುತ್ತಿರುವ ವಿಷಯ ಬೆಳಕಿಗೆ ಬಂದಿದ್ದು, ಸ್ವತಃ ಕಾಂಗ್ರೆಸ್ ಮುಖಂಡರು ಈ ವಿಷಯ ಒಪ್ಪಿಕೊಂಡಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದೆ. ಬೀದರ್ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಅಭಿಮಾನವಿದೆ. ರಾಹುಲ್ ಗಾಂಧಿ ಕರ್ನಾಟಕದ ಯಾವುದೇ ಭಾಗದಲ್ಲಿ ನಿಂತರೂ ಗೆಲ್ಲುತ್ತಾರೆ. ಎಂದು ಎಐಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ಒಂದು ವೇಳೆ ರಾಹುಲ್ ಗಾಂಧಿ ಬೀದರ್ ನಿಂದ ಸ್ಪರ್ಧಿಸಿದರೆ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸ್ಪರ್ಧಿಸಿ ಜಯ ಸಾಧಿಸಿದ್ದರು. ಈ ಕ್ಷೇತ್ರದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Next Story

RELATED STORIES