Top

ಲೋಕಸಭೆ ಜೊತೆ 11 ರಾಜ್ಯಗಳ ಚುನಾವಣೆಗೆ ಬಿಜೆಪಿ ಮನವಿ: ಚು.ಆಯೋಗ ಹಿಂದೇಟು

ಲೋಕಸಭೆ ಜೊತೆ 11 ರಾಜ್ಯಗಳ ಚುನಾವಣೆಗೆ ಬಿಜೆಪಿ ಮನವಿ: ಚು.ಆಯೋಗ ಹಿಂದೇಟು
X

ನವದೆಹಲಿ: 2019ರ ಲೋಕಸಭೆ ಚುನಾವಣೆ ಜೊತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಬಿಜೆಪಿ ಮಾಡಿದ್ದ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ಹಿಂದೇಟು ಹಾಕಿದ್ದು, ಇವಿಎಂ ಕೊರತೆ ಇದೆ ಎಂದು ಕಾರಣ ನೀಡಿದೆ.

ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಲೋಕಸಭಾ ಚುನಾವಣೆ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನೂ ನಡೆಸುವಂತೆ ಮನವಿ ಮಾಡಿದ್ದರು.

ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಪಿ ರಾವತ್, ಒಂದೇ ಬಾರಿಗೆ ಲೋಕಸಭೆ ಹಾಗೂ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಕಾರಣ ನಮ್ಮ ಬಳಿ ಅಷ್ಟು ವಿವಿ ಪ್ಯಾಟ್ ಇಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಒಂದು ರಾಷ್ಟ್ರ ಒಂದು ಚುನಾವಣೆ ಎಂಬ ಪರಿಕಲ್ಪನೆ ಅಡಿಯಲ್ಲಿ ಅಮಿತ್ ಶಾ ಅವರು ಆಯೋಗಕ್ಕೆ ಪತ್ರ ಬರೆದಿದ್ದರು.

ಆದರೆ ಛತ್ತೀಸ್​ಘಡ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಚುನಾವಣೆಯಗಳಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಆಗಲಿದೆ ಎಂದು ಸಮೀಕ್ಷೆಗಳು ಎಚ್ಚರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಎರಡೂ ಚುನಾವಣೆಯನ್ನು ಒಂದೇ ಬಾರಿಗೆ ನಡೆಸುವ ಮೂಲಕ ಸಮಯ ಉಳಿತಾಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್ಚಾಗಿ ಬಳಸಿಕೊಳ್ಳಲು ಯೋಜಿಸಿತ್ತು. ಆದರೆ ಈ ತಂತ್ರಕ್ಕೆ ಹಿನ್ನಡೆ ಉಂಟಾದಂತಾಗಿದೆ.

Next Story

RELATED STORIES