Top

ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ - ಡಿ.ಎಸ್.ವೀರಯ್ಯ

ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ - ಡಿ.ಎಸ್.ವೀರಯ್ಯ
X

ಬೆಂಗಳೂರು : ಬಡ್ತಿ ಮೀಸಲಾತಿ ಕಾಯ್ದೆ ಅಂಗೀಕಾರಗೊಂಡು ತಿಂಗಳು ಕಳೆದರೂ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಜಾರಿ ಮಾಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ಎಸ್ಸಿ ಮೋರ್ಚಾ ಲೋಕಸಭಾ ಚುನಾವಣಾ ಪ್ರಚಾರ ನಡೆಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ ತಿಳಿಸಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿ ಎಸ್ ವೀರಯ್ಯ ಮಾತಾಡಿದ ಅವರು, ಇತ್ತೀಚೆಗೆ ರಾಜ್ಯ ಸರ್ಕಾರ ಬಡ್ತಿ ಮೀಸಲಾತಿಯ ಜ್ಯೇಷ್ಠತೆಗೆ ತಂದ ಸುಗ್ರೀವಾಜ್ಞೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದಕ್ಕೆ ಕಾಯ್ದೆ ಅಂಗೀಕಾರವಾಯಿತು. ಜೊತೆ ರಾಷ್ಟ್ರಪತಿ ಕೂಡ ಸುಗ್ರೀವಾಜ್ಞೆಯನ್ನು ಅಂಗೀಕರಿಸಿದ್ದಾರೆ. ಆದರೆ ಬಡ್ತಿ ಮೀಸಲಾತಿ ಕಾಯ್ದೆ ಅಂಗೀಕಾರಗೊಂಡು ತಿಂಗಳು ಕಳೆದರೂ ಸಮ್ಮಿಶ್ರ ಸರ್ಕಾರ ಕಾಯ್ದೆಯನ್ನು ಜಾರಿ ಮಾಡುತ್ತಿಲ್ಲ ಎಂದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಇದು ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳ ದಲಿತ ವಿರೋಧಿ ನೀತಿಗೆ ನಿದರ್ಶನವಾಗಿದೆ. ಕೂಡಲೇ ಹಿಂಬಡ್ತಿ ಹೊಂದಿದ ನೌಕರರಿಗೆ ಮುಂಬಡ್ತಿ ನೀಡುವ ಆದೇಶವನ್ನು ಹೊರಡಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಪತಿ ಅಂಕಿತ ಹಾಕಿದ ಕಾಯ್ದೆ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವ ಮೈತ್ರಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಪ್ರವಾಸ ಮಾಡಿ ಜಿಲ್ಲೆಗಳಲ್ಲಿ ಈ ಕುರಿತು ಜಾಗೃತಿ ಮೂಡಿಸುತ್ತೇವೆ. ಸಮ್ಮಿಶ್ರ ಸರ್ಕಾರದ ವಿರುದ್ಧ ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನೂ ಮಾಡುತ್ತೇವೆ ಅಂತ ಮಾಜಿ ವಿಧಾನಪರಿಷತ್ ಸದಸ್ಯ ಡಿ ಎಸ್ ವೀರಯ್ಯ ತಿಳಿಸಿದರು.

Next Story

RELATED STORIES