ಶಿಕ್ಷೆಯಿಂದ ಪಾರಾದ ಸ್ಟೋಕ್ಸ್: ಮೂರನೇ ಟೆಸ್ಟ್ಗೆ ವಾಪಸ್?

X
TV5 Kannada15 Aug 2018 9:58 AM GMT
ಕ್ಲಬ್ನಲ್ಲಿ ನಡೆದ ದಾಂಧಲೆಯಲ್ಲಿ ಹಲ್ಲೆ ನಡೆಸಿದ ಆರೋಪದಿಂದ ಮುಕ್ತವಾಗುತ್ತಿದ್ದಂತೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಬೆನ್ ಸ್ಟೋಕ್ಸ್ ಆಗಸ್ಟ್ 18ರಿಂದ ಆರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
11 ತಿಂಗಳ ವಿಚಾರಣೆ ನಂತರ ಬೆನ್ ಸ್ಟೋಕ್ಸ್ ಅವರನ್ನು ಅಪರಾಧಿ ಎಂದು ಪರಿಗಣಿಸುವುದು ಕಷ್ಟ ಎಂದು ಸ್ಥಳೀಯ ನ್ಯಾಯಾಲಯ ಆದೇಶ ನೀಡಿತ್ತು.
ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್ ಲಾರ್ಡ್ಸ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಅಲ್ಲದೇ ನಾಟಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ 13 ಆಟಗಾರರ ತಂಡವನ್ನು ಈಗಾಗಲೇ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಪ್ರಕಟಿಸಿತ್ತು.
ಆದರೆ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಇಂಗ್ಲೆಂಡ್ ಮಂಡಳಿ ಬೆನ್ ಸ್ಟೋಕ್ಸ್ ಅವರನ್ನು ತಂಡದಲ್ಲಿ ಸೇರ್ಪಡೆ ಮಾಡಿದೆ. ಇದರಿಂದ ಸ್ಟೋಕ್ಸ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತವಾದಂತಾಗಿದೆ.
Next Story