ದರ್ಶನ್ ಅಭಿಮಾನಿಗಳಿಗೆ ಲಾಠಿ ಏಟು..!
TV5 Kannada15 Aug 2018 8:21 AM GMT
ರಾಮನಗರ: ನೂತನ ಆಭರಣ ಮಳಿಗೆ ಉದ್ಘಾಟನೆ ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಮನಗರಕ್ಕೆ ಆಗಮಿಸಿದ್ದರು. ಈ ವೇಳೆ ನೆಚ್ಚಿನ ನಟನನ್ನು ನೋಡಲು ಜನ ಮುಗಿಬಿದ್ದಿದ್ದು, ಅಭಿಮಾನಿಗಳನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸಪಟ್ಟರಲ್ಲದೇ, ಅವರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ರು.
ರಾಮನಗರದಲ್ಲಿನ ಎಂ.ಎಸ್.ಗೋಲ್ಡ್ ಅಂಡ್ ಡೈಮಂಡ್ಸ್ ಉದ್ಘಾಟನೆಗೆ ನಟ ದರ್ಶನ್ ಆಗಮಿಸಿದ್ದು, ದರ್ಶನ್ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಹೆದ್ದಾರಿಯಲ್ಲಿ ದರ್ಶನ್ ಅಭಿಮಾನಿಗಳು ಸೇರಿದ್ದು, ಟ್ರಾಫಿಕ್ ಜಾಮ್ ಉಂಟಾಗಿ, ಅಭಿಮಾನಿಗಳನ್ನು ಚದುರಿಸಲು ಹರಸಾಹಸಪಡಬೇಕಾಯಿತು. ಈ ಕಾರಣಕ್ಕಾಗಿ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
https://www.youtube.com/watch?v=dWeS5tWH1H0
Next Story