Top

ಕೊಡಗು ಜಿಲ್ಲೆಗೆ ನಾಳೆ ಮುಖ್ಯಮಂತ್ರಿ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ಪರಿಶೀಲನೆ ನಡೆಸಸಲಿದ್ದಾರೆ.

ಅವರು ಬೆಳಿಗ್ಗೆ 10.30 ಗಂಟೆಗೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ.

ಭಾನುವಾರ ಆಗಸ್ಟ್ 19 ರಂದು ನಂಜನಗೂಡು, ಕಬಿನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿದ್ದು, ಸಂತ್ರಸ್ತ ಪ್ರದೇಶಕ್ಕೆ ನಾಳೆ ಸಿಎಂ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೇ ಇದೇ ವೇಳೆ ನಾಳೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಿಂದ ಹಿಂತಿರುಗಿದ ಕೂಡಲೇ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಾಚರಣೆ ಕುರಿತು ಮುಖ್ಯ ಕಾರ್ಯದರ್ಶಿ ಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆ ಯಲ್ಲಿ ಸೇನಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಕಾರ್ಯನಿರ್ವಹಿಸುತ್ತಿವೆ.

ಮೈಸೂರು, ಮಂಡ್ಯ, ರಾಮನಗರ, ಹಾಸನ ಜಿಲ್ಲೆಗಳ ಕಂದಾಯ ಇಲಾಖೆಯ ಸಿಬ್ಬಂದಿ, ಅರಣ್ಯ ಇಲಾಖೆಯ ಸೊಬ್ಬಂದಿಯನ್ನು ಸಹ ಪರಿಹಾರ ಕಾರ್ಯಗಳಿಗಾಗಿ ಕೊಡಗು ಜಿಲ್ಲೆಗೆ ನಿಯೋಜಿಸಲಾಗುತ್ತಿದೆ.

ಗಂಜಿ ಕೇಂದ್ರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಆಹಾರ ಸಾಮಗ್ರಿ, ಹೊದಿಕೆಗಳನ್ನು ಮೈಸೂರಿನಿಂದ ಕಳುಹಿಸಲಾಗುತ್ತಿದೆ. ಅಲ್ಲದೆ 200 ಜನ ಸ್ವಯಂ ಸೇವಕರು ಮೈಸೂರಿನಿಂದ ಕೊಡಗು ಜಿಲ್ಲೆಗೆ ತೆರಳುತ್ತಿದ್ದಾರೆ.

ಕಂದಾಯ ಸಚಿವ ಆರ್. ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಕೊಡಗಿನಲ್ಲಿಯೇ ಮೊಕ್ಕಾಮ್ ಹೂಡಿದ್ದು ಪರಿಹಾರ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ನಾಳೆ ಬೆಳಿಗ್ಗೆ 11.30 ಗಂಟೆಗೆ ಮುಖ್ಯಮಂತ್ರಿ ಗಳು ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ತಿಳಿಸಿದೆ.

Next Story

RELATED STORIES