Top

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ನೆರವಿಗೆ ಸೈನಿಕರು

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ನೆರವಿಗೆ ಸೈನಿಕರು
X

ಕೊಡಗಿನಲ್ಲಿ ಮಹಾಮಳೆಯ ಆರ್ಭಟ ಮುಂದುವರಿದಿದ್ದು, ಇದರಿಂದ ಭೂಕುಸಿತ, ಮನೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರಿಂದ ಮನೆ ತೊರೆಯುತ್ತಿರುವ ನಾಗರೀಕರು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಬೀಳುತ್ತಿದ್ದು, ಮಕ್ಕಂದೂರು, ಮುಕ್ಕೋಡ್ಲು, ಕಾಲೂರು ಗ್ರಾಮಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಬೃಹತ್ ಗುಡ್ಡಗಳು ಕುಸಿಯುತ್ತಿರುವುದು ಮುಂದುವರಿಯುತ್ತಿವೆ. ಆತಂಕದಿಂದ ನೂರಾರು ಕುಟುಂಬಗಳು ಮನೆ ತೊರೆದು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಈವರೆಗೆ ಸುಮಾರು 873 ಮಂದಿಯ ರಕ್ಷಿಸಲಾಗಿದ್ದು, 1000ಕ್ಕೂ ಹೆಚ್ಚು ಮಂದಿಗೆ ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಅಧಿಕೃತವಾಗಿ 6 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರು ಮೃತಪಟ್ಟಿರುವ ಶಂಕೆ ಇದೆ.

ಡೋಗ್ರಾ ರೆಜ್‌ಮೆಂಟ್‌ನ 60 ಸೈನಿಕರು, ಭಾರತೀಯ ಸೇನಾ ಪಡೆಯ ತಾಂತ್ರಿಕ ವಿಭಾಗದ 73 ಸೈನಿಕರು, 12 ಮಂದಿ ಪರಿಣಿತ ಮುಳುಗು ತಜ್ಞರು, ಅಗ್ನಿಶಾಮಕ ದಳದ 200 ಸಿಬ್ಬಂದಿ, ನಾಗರಿಕ ರಕ್ಷಣಾ ಪಡೆಯಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.

Next Story

RELATED STORIES