Top

ಮಡಿಕೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದ ಸಿಎಂ

ಮಡಿಕೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದ ಸಿಎಂ
X

ಮಡಿಕೇರಿ : ನರೆ ಹಾವಳಿಯಿಂದ ತತ್ತರಿಸಿರುವ ಕೊಡಗಿಗೆ, ಇಂದು ಎರಡನೇ ದಿನದ ಪ್ರವಾಸವನ್ನು ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ನಡೆಸಿದರು.

ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗಾಗಿ ನಿರ್ಮಿಸಲಾಗಿದ್ದ ನಿರಾಶ್ರಿತರ ಪರಿಹಾರ ಕೇಂದ್ರಗಳಿಗೆ ತೆರಳಿದ ಮುಖ್ಯಮಂತ್ರಿ, ನೊಂದ ಜನರಿಗೆ ಸಾಂತ್ವಾನ ಹೇಳಿದರು.

ಈ ಬಳಿಕ ಜಿಲ್ಲೆಯ ನೆರೆ ಹಾವಳಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಖುದ್ದು ಅಧಿಕಾರಿಗಳ ಜೊತೆಗೆ ಪರಿಸ್ಥಿತಿಯನ್ನು ಅವಲೋಕಿಸಿದರು.

ನೆರೆ ಹಾವಳಿಯನ್ನು ಪರಿಶೀಲಿಸಿದ ಬಳಿಕ ಮಡಿಕೇರಿಯ ಜಿಲ್ಲಾಢಳಿತದ ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ಸಂತ್ರಸ್ತರಿಗೆ ನರೆವು, ರಕ್ಷಣಾ ಕಾರ್ಯದ ಬಗ್ಗೆ ಚರ್ಚೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರದ ಕಾರ್ಯದ ಬಗ್ಗೆ ಪರಾಮರ್ಶೆ ನಡೆಸಿದ ಮುಖ್ಯಮಂತ್ರಿಗಳು, ಮುಂದೆ ಕೈಗೊಳ್ಳ ಬಹುದಾದ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದರು.

ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ನೆರೆ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ನೆರವಾಗಬೇಕು. ಸಕಾಲದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ರಕ್ಷಣಾ ಕಾರ್ಯ, ಸಂತ್ರಸ್ತರಿಗೆ ನೆರವು ಸೇರಿದಂತೆ ಯಾವುದೇ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೇ, ಅಂತಹ ಅಧಿಕಾರಿಗಳನ್ನು ಅಮಾನತ್ತು ಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಜಿಲ್ಲಾಧಿಕಾರಿ ಪಿ ಐ ಶ್ರೀವಿದ್ಯಾ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Next Story

RELATED STORIES