Top

ಈ ಬಾರಿ ಅದ್ದೂರಿ ದಸರಾ ಆಚರಣೆ ಇಲ್ಲ.!

ಮೈಸೂರು : ಕೊಡಗು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಇಲ್ಲ.

ಈ ಬಾರಿ ಪ್ರವಾಸಿಗರ ಸ್ನೇಹಿ ಹಾಗೂ ಅದ್ದೂರಿ ದಸರಾ ಆಚರಣೆಗೆ ಸಿದ್ದತೆ ನಡೆದಿದೆ. ಅದಕ್ಕಾಗಿ ಮೈಸೂರು ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಗಿದೆ.

ಕೊಡಗು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಅದ್ದೂರಿ ದಸರಾ ನಡೆಸದಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ದಸರಾ ಆಚರಣಾ ಜನಪ್ರತಿನಿಧಿಗಳ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು,

ಪ್ರತಿ ವರ್ಷದಂತೆ ಈ ಬಾರಿ ದಸರಾ ಆಚರಣೆ ಮಾಡಲಾಗುತ್ತದೆ. ಆದರೇ ನೆರೆ ಹಾವಳಿಯಿಂದಾಗಿ ಜನರು ತತ್ತರಿಸಿರುವ ಕಾರಣ ಅದ್ದೂರಿ ದಸರಾ ಆಚರಣೆ ಇಲ್ಲ. ಬದಲಾಗಿ ಪ್ರವಾಸಿಗರ ಸ್ನೇಹಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನೂ ಇದೇ ವೇಳೆ ಈ ಬಾರಿ ಉತ್ತಮ ಮಳೆಯಾಗಿದೆ. ತಮಿಳುನಾಡಿಗೆ ಮುಂದಿನ ಸೆಪ್ಟಂಬರ್‌ ವರೆಗೂ ಬಿಡಬೇಕಾದ ನೀರು ಬಿಟ್ಟಿದ್ದೇವೆ. ತಮಿಳುನಾಡಿಗೆ ನೀರು ಬಿಡುವ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಅಲ್ಲದೇ ಮಾಧ್ಯಮಗಳು ಕೇಳಿದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಯಾವಾಗ ಎಂಬ ಪ್ರಶ್ನೇಗೆ, ಶೀಘ್ರದಲ್ಲೇ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದಾಗಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

Next Story

RELATED STORIES