Top

ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಪತ್ನಿ ವಿಧಿವಶ

ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಪತ್ನಿ ವಿಧಿವಶ
X

ಬೆಂಗಳೂರು : ಕಡೂರಿನ ಮಾಜಿ ಶಾಸಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ವೈ ಎಸ್ ವಿ ದತ್ತ ರವರ ಪತ್ನಿ ಶ್ರೀಮತಿ ನಿರ್ಮಲಾ ಬೆಂಗಳೂರು ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

60 ವರ್ಷದ ನಿರ್ಮಲಾ ಕಳೆದ ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇವರನ್ನು ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು.

ಇಂತಹ ಮಾಜಿ ಶಾಸಕ ವೈ ಎಸ್‌ ಪಿ ದತ್ತ ಪತ್ನಿ ನಿರ್ಮಲಾ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಪತಿ, ಒಬ್ಬಳೇ ಮಗಳನ್ನು ಅಗಲಿದ್ದಾರೆ.

ಇವರ ಅಂತಿಮ ದರ್ಶನ ಕಾರ್ಯ ನಾಳೆ ಬೆಳಿಗ್ಗೆ 10ಗಂಟೆಗೆ ವೈ ಎಸ್‌ ವಿ ದತ್ತಾ ಅವರ ರಾಜಾಜಿನಗರದ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ದತ್ತ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಜಿ ಕಡೂರು ಶಾಸಕ ವೈ.ಎಸ್.ವಿ.ದತ್ತ ಪತ್ನಿ ನಿರ್ಮಲಾ‌ ನಿಧನಕ್ಕೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ತೆರೆಳಿ ಸಂತಾಪ ಸೂಚಿಸಿದರು.

ಇತ್ತ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Next Story

RELATED STORIES