Top

ಕೊಡಗಿಗೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು: ನಿರ್ಮಲಾ ಸೀತರಾಮನ್

ಕೊಡಗಿಗೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು: ನಿರ್ಮಲಾ ಸೀತರಾಮನ್
X

ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್, ಕೊಡಗಿನ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.

ಮೈಸೂರಿಗೆ ರಾತ್ರಿ ವಿಶೇಷ ಹೆಲಿಕಾಫ್ಟರ್ ಮೂಲಕ ಆಗಮಿಸಿದ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತರಾಮನ್, ಬೆಳಗ್ಗೆ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಸಂಸದರ ನಿಧಿಯಿಂದ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಕೊಡಗು ಅಥವಾ ಕೇರಳಕ್ಕೆ ಕೇಂದ್ರ ಸರಕಾರ ಈಗ ನೀಡಿರುವ ಅನುದಾನ ಕೇವಲ ತುರ್ತು ಪರಿಹಾರಕ್ಕಾಗಿ ನೀಡಿದೆ. ಕೇಂದ್ರ ತಂಡ ಅಧ್ಯಯನ ನಡೆಸಿದ ನಂತರ ಪೂರ್ಣ ಪ್ರಮಾಣದಲ್ಲಿ ಪರಿಹಾರ ಮೊತ್ತ ನೀಡಲಿದೆ ಎಂದು ನಿರ್ಮಲಾ ಸೀತರಾಮನ್ ಸ್ಪಷ್ಟಪಡಿಸಿದರು.

Next Story

RELATED STORIES