Top

ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯಿಂದ ಚಪ್ಪಲಿ ಏಟು..!

ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯಿಂದ ಚಪ್ಪಲಿ ಏಟು..!
X

ಕೊಪ್ಪಳ: ಕೊಪ್ಪಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿಯ 20ನೇ ವಾರ್ಡಿನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ದ್ಯಾಮಣ್ಣ ಡೊಳ್ಳಿನ ಎಂಬುವರಿಗೆ ರೊಚ್ಚಿಗೆದ್ದ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದಿದ್ದಾರೆ.

ಈ ಹಿಂದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾಮಪತ್ರ ವಾಪಸ್ ಪಡೆದುಕೊಳ್ಳುವ ಸಂಬಂಧ ಗಲಾಟೆಯಾಗಿತ್ತು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ದ್ಯಾಮಣ್ಣ ಡೊಳ್ಳಿನ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹಳೇ ದ್ವೇಷದ ಹಿನ್ನೆಲೆ ನಿನ್ನೆ ಪ್ರಚಾರಕ್ಕೆ ತೆರಳಿದಾಗ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾರೆ.ಸದ್ಯ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

Next Story

RELATED STORIES