Top

ಬಿಜೆಪಿಗೆ ಹಾರಿದ ಚಿಂಚನಸೂರ್​: ಆಪರೇಷನ್ ಕಮಲ ಶುರು?

ಬಿಜೆಪಿಗೆ ಹಾರಿದ ಚಿಂಚನಸೂರ್​: ಆಪರೇಷನ್ ಕಮಲ ಶುರು?
X

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಮೂಲಕ ಬಿಜೆಪಿ ಆಪರೇಷನ್ ಕಮಲದ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್​ ತೊರೆದ ಬಾಬುರಾವ್ ಚಿಂಚನಸೂರ್ ಬಿಜೆಪಿಗೆ ಸೇರ್ಪಡೆಗೊಂಡರು.

ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ಬಿಎಸ್​ವೈ, ಚಿಂಚನಸೂರ್ ಆಗಮನದಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಉತ್ತರ ಕರ್ನಾಟಕದಲ್ಲಿ ಜಯ ಸಾಧಿಸುತ್ತೇವೆ ಎಂದರು.

ಚಿಂಚನಸೂರ್ ಮಾತನಾಡಿ, ಕೋಲಿ, ಗಂಗಾಮತಸ್ಥ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದೆ. ನನ್ನ ಸೋಲಿಗೆ ಬಿಜೆಪಿ ಅಥವಾ ಜೆಡಿಎಸ್ ಕಾರಣವಲ್ಲ. ಕಾಂಗ್ರೆಸ್​ನವರೇ ಕಾರಣ ಎಂದು ಆರೋಪಿಸಿದರು.

Next Story

RELATED STORIES