Top

ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್‌ಐಆರ್‌ ದಾಖಲು

ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್‌ಐಆರ್‌ ದಾಖಲು
X

ಹಾಸನ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿ ಪೊಲೀಸ್ ಠಾಣೆಗೆ ನುಗ್ಗಿ ಶಾಸಕ ಪ್ರೀತಮ್ ಗೌಡ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ಪ್ರೀತಮ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನಗರಸಭೆ ಚುನಾವಣೆ ಹಿನ್ನೆಲೆ ಅಕ್ರಮ ಮದ್ಯ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತ ವೇಣು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿಸಿದ್ದ ಆರೋಪಿಗಳನ್ನು ಪೊಲೀಸ್ ಠಾಣೆಗೆ ನುಗ್ಗಿ ಹೊರ ಕರೆತಂದಿದ್ದಾರೆ ಅನ್ನೋ ಆರೋಪದಡಿ, ಹಾಸನ ಪೊಲೀಸ್ ಠಾಣೆಯಲ್ಲಿ ಪ್ರೀತಮ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸತ್ಯನಾರಾಯಣ ನೀಡಿದ ದೂರಿನಡಿ ಪ್ರಕರಣ ದಾಖಲಾಗಿದ್ದು, ಶಾಸಕ ಪ್ರೀತಮ್ ಗೌಡ ವಿರುದ್ದ ಐಪಿಸಿ ಸಕ್ಷನ್ 143, 353, 225ರ ಅಡಿ ಪ್ರಕರಣ ದಾಖಲಾಗಿದೆ.

Next Story

RELATED STORIES