ಏಷ್ಯಾಕಪ್: ಕೊಹ್ಲಿಗೆ ವಿಶ್ರಾಂತಿ, ರೋಹಿತ್ಗೆ ಪಟ್ಟ

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 15ರಿಂದ ಆರಂಭಗೊಳ್ಳಲಿರುವ ಏಷ್ಯಾಕಪ್ ಏಕದಿನ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಗೆ ಸಾರಥ್ಯವನ್ನು ವಹಿಸಲಾಗಿದೆ.
ಶನಿವಾರ ಬಿಸಿಸಿಐ ಅಯ್ಕೆ ಸಮಿತಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಶಿಖರ್ ಧವನ್ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಕರ್ನಾಟಕದ ಮನೀಷ್ ಪಾಂಡೆ ಮತ್ತು ಕೇದಾರ್ ಜಾಧವ್ ತಂಡಕ್ಕೆ ಮರಳಿದ್ದಾರೆ. ವೇಗದ ಬೌಲರ್ 20 ವರ್ಷದ ಖಲೀಲ್ ಅಹ್ಮದ್ ಭಾರತ ತಂಡದಲ್ಲಿ ಕಾಣಿಸಿಕೊಂಡ ಹೊಸ ಮುಖವಾಗಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದರೂ ಆಡಲು ಅವಕಾಶಕ್ಕಾಗಿ ಕಾಯುತ್ತಿರುವ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ:
ರೋಹಿತ್ ಶರ್ಮ (ನಾಯಕ), ಶಿಖರ್ ಧವನ್ (ಉಪನಾಯಕ), ಕೆ.ಎಲ್. ರಾಹುಲ್, ಅಂಬಟಿ ರಾಯುಡು, ಮನೀಷ್ ಪಾಂಡೆ, ಕೇದಾರ್ ಜಾಧವ್, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುರ್ವೆಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್.