Top

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ: 10 ಮಂದಿ ಸಾವು
X

ಗುಂಡಿನ ದಾಳಿಗೆ ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟು 3 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಅಪಾರ್ಟ್​ಮೆಂಟ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಬೆರ್ನಾಡಿನೊ ಅಪಾರ್ಟ್​ಮೆಂಟ್​ನಲ್ಲಿ ವೀಕೆಂಡ್​ ಪಾರ್ಟಿ ಹಾಗೂ ಆಟೋಟಗಳಲ್ಲಿ ತೊಡಗಿದ್ದರಿಂದ ಗುಂಡಿನ ದಾಳಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದಾಗ 10 ಮಂದಿ ಮೃತಪಟ್ಟಿದ್ದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಲಾಸ್ ಏಂಜಲೀಸ್​ನಿಂದ 60 ಕಿ.ಮೀ. ದೂರದಲ್ಲಿರುವ ಈ ನಗರದಲ್ಲಿ ಗುಂಡಿನ ದಾಳಿ ಏಕೆ ನಡೆಯಿತು ಮತ್ತು ಹೇಗೆ ಯಾರಿಂದ ಎಂಬ ಬಗ್ಗೆ ಪೊಲೀಸರು ಇನ್ನಷ್ಟೇ ಮಾಹಿತಿ ಸಂಗ್ರಹಿಸಬೇಕಿದೆ. ಘಟನೆ ಸಂಬಂಧ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ವಿವರಿಸಿದ್ದಾರೆ.

Next Story

RELATED STORIES