Top

ದಾಖಲೆಯ ಅಂಕದೊಂದಿಗೆ ಕೊಹ್ಲಿಗೆ ಅಗ್ರಸ್ಥಾನ

ದಾಖಲೆಯ ಅಂಕದೊಂದಿಗೆ ಕೊಹ್ಲಿಗೆ ಅಗ್ರಸ್ಥಾನ
X

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗೆ ಮುಕ್ತಾಯಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಪಡೆಯಲು ವಿಫಲರಾದರೂ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಅಂಕಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡರು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮುನ್ನಡೆ ಸಾಧಿಸಿದ್ದರೂ 60 ರನ್​ಗಳಿಂದ ಸೋಲುಂಡಿತ್ತು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ಹಾಗೂ ಎರಡನೇ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ 58 ರನ್ ಬಾರಿಸಿದ್ದರು.

ಟೆಸ್ಟ್ ಸರಣಿಯಲ್ಲಿ ಭರ್ಜರಿ ಫಾರ್ಮ್​ ಮುಂದುವರಿಸಿರುವ ಕೊಹ್ಲಿ ರ್ಯಾಂಕಿಂಗ್​ ಅನ್ನು 937ಕ್ಕೆ ಹೆಚ್ಚಿಸಿಕೊಂಡರು. ಈ ಮೂಲಕ ಸತತ ಎರಡನೇ ವಾರವೂ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡರು.

ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಚೇತೇಶ್ವರ್ ಪೂಜಾರ ಎರಡನೇ ಇನಿಂಗ್ಸ್​ನಲ್ಲಿ ಶತಕ ಸಿಡಿಸಿದ್ದರಿಂದ 6ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Next Story

RELATED STORIES