Top

ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿಗಳ ಸಾವು
X

ಬೆಂಗಳೂರು: ದೇವನಹಳ್ಳಿ ಬಳಿಯ ಚಿಕ್ಕಸೊಣ್ಣೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕ್ಯಾಂಟರ್ ವಾಹನಕ್ಕೆ ಕಾರು ಗುದ್ದಿದ್ದು, ಈ ದುರಂತ ಸಂಭವಿಸಿದೆ.

https://www.youtube.com/watch?v=EaggXoNQM_k&feature=youtu.be

ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆ ಕಾರು ತೆರಳುತ್ತಿತ್ತು. ಈ ವೇಳೆ ಕ್ಯಾಂಟರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕಾರಿನಲ್ಲಿದ್ದ ನಾಲ್ಕು ಜನ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ವಿಶಾಲ್, ಪ್ರಜ್ವಲ್, ಭೂಷಣ್ ಮೃತ ವಿದ್ಯಾರ್ಥಿಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರು ಬೆಂಗಳೂರಿನ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದು, ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Next Story

RELATED STORIES