Top

ಕಾಂಗ್ರೆಸ್ ಪಕ್ಷಕ್ಕೆ ಹೇಳೊರು ಕೇಳೋರು ಯಾರೂ ಇಲ್ಲ : ಈಶ್ವರಪ್ಪ ಲೇವಡಿ

ಕಾಂಗ್ರೆಸ್ ಪಕ್ಷಕ್ಕೆ ಹೇಳೊರು ಕೇಳೋರು ಯಾರೂ ಇಲ್ಲ : ಈಶ್ವರಪ್ಪ ಲೇವಡಿ
X

ಶಿವಮೊಗ್ಗ : ಕಾಂಗ್ರೆಸ್ ಪಕ್ಷಕ್ಕೆ ಹೇಳೋರು ಕೇಳೋರು ಯಾರೂ ಇಲ್ಲ ಅನ್ನೋದಕ್ಕೆ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಒಂದೇ ಸಾಕು ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಂದು ರಾಷ್ಟ್ರೀಯ ಪಕ್ಷದ ಪರಿಸ್ಥಿತಿ ಹೀನಾಯ ಸ್ಥಿತಿ ತಲುಪಿರುವುದು.. ಪ್ರಜಾಪ್ರಭುತ್ವಕ್ಕೆ ಅವಮಾನ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಬೆಳಗಾವಿಗೆ ಹೋಗ್ತಾರೆ.. ಅಲ್ಲಿಂದ ಯೂರೋಪ್ ಗೆ ಫೋನ್ ಮಾಡ್ತಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರವರಿಗೆ ಕಾಲ್ ಮಾಡ್ತಾರೆ.. ಇಂತಹ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಬರಬಾರದಿತ್ತು ಎಂದು ಹೇಳಿದರು.

ಸಿಎಂ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಲ್ಲೇ ಸಾಕಷ್ಟು ಗೊಂದಲ ಇದೆ.. ಗೊಂದಲ ಮುಚ್ಚಿಹಾಕಿಕೊಳ್ಳಲು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ದೂರಿದರು.

Next Story

RELATED STORIES