Top

ಅಮಿತ್ ಶಾಗೆ 2019ರ ಚುನಾವಣೆಯ ಸಾರಥ್ಯ?

ಅಮಿತ್ ಶಾಗೆ 2019ರ ಚುನಾವಣೆಯ ಸಾರಥ್ಯ?
X

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಎದುರಿಸಲು ಶನಿವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೆಹಲಿಯಲ್ಲಿ ನಡೆದ ಎರಡು ದಿನಗಳ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ಅಮಿತ್ ಶಾ ಮಾರ್ಗದರ್ಶನದಲ್ಲಿ 2019ರ ಲೋಕಸಭೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಪ್ರತ್ಯೇಕ ಕಾರ್ಯತಂತ್ರ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಶಾಸಕರು ಮುಂತಾದವರು ಪಾಲ್ಗೊಂಡಿದ್ದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿ 'ಅಜೇಯ ಬಿಜೆಪಿ’ ಘೋಷವಾಕ್ಯದೊಂದಿಗೆ ಎದುರಿಸಲಿದೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳು ಹಾಗೂ ಹಿಂದಿನ ಸರಕಾರಗಳ ವೈಫಲ್ಯವನ್ನು ಜನರ ಮುಂದಿಡುವ ಮೂಲಕ ಚುನಾವಣೆ ಎದುರಿಸಲು ಅಮಿತ್ ಶಾ ಕರೆ ನೀಡಿದ್ದಾರೆ ಎಂದು ಹೇಳಲಾಗಿದೆ.

Next Story

RELATED STORIES