ಚಾತುರ್ಮಾಸ ಪೂಜೆ ನೆಪದಲ್ಲಿ ಗೃಹಿಣಿ ಮೇಲೆ ಅತ್ಯಾಚಾರ!

X
TV5 Kannada8 Sep 2018 10:22 AM GMT
ಚಾತುರ್ಮಾಸ ಪೂಜೆಗೆಂದು ಮನೆಗೆ ಬಂದ ಸ್ವಾಮೀಜಿಯೊಬ್ಬ ಅತ್ಯಾಚಾರ ಎಸಗಿದ್ದು, ಇದಕ್ಕೆ ಪತಿಯೇ ಸಹಕಾರ ನೀಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮೈಸುರಿನ ಕುವೆಂಪು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ಚಾತುರ್ಯಮಾಸ ಪೂಜೆಯಲ್ಲಿ ತೊಡಗಿದ್ದ ತಾಂಡವಪುರ ಅಪ್ಪಾಜಿ ಆಶ್ರಮದ ವಿದ್ಯಾಹಂಸ ಭಾರತಿ ಸ್ವಾಮೀಜಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.
ಚಾತುರ್ಮಾಸ ನೆಪದಲ್ಲಿ ಪೂಜೆ ಮನೆಗೆ ಬಂದಿದ್ದ ವಿದ್ಯಾಹಂಸ ಭಾರತೀ ಸ್ವಾಮೀಜಿ ಮನೆಗೆ ನುಗ್ಗಿ ಹಲ್ಲೆ ನಡೆಸಿ ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಕುವೆಂಪು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story