ಭಾರತ್ ಬಂದ್ಗೆ ರಾಹುಲ್ ಸಾರಥ್ಯ: ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ

X
TV5 Kannada10 Sep 2018 5:32 AM GMT
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಾಗೂ ರೂಪಾಯಿ ಅಪಮೌಲ್ಯ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಬಂದ್ ವೇಳೆ ಯಾವುದೇ ಹಿಂಸಾಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಸೂಚನೆ ನೀಡಿತು.
ಕಾಂಗ್ರೆಸ್ ಕರೆ ನೀಡಿರುವ ಬಂದ್ಗೆ ಎಡಪಕ್ಷಗಳು ಸೇರಿದಂತೆ 21 ಪ್ರತಿಪಕ್ಷಗಳು ಬೆಂಬಲ ನೀಡಿವೆ. ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂದ್ ಗೆ ಬೆಂಬಲ ನೀಡದೇ ಇರಲು ನಿರ್ಧರಿಸಿದೆ.
ಬಂದ್ಗೆ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಆಡಳಿತ ಇರುವ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ಬಿಜೆಪಿ ಮತ್ತಿತರ ರಾಜ್ಯಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
Next Story