ತೆಲಂಗಾಣದಲ್ಲಿ ಬಸ್ ಉರುಳಿ 40 ಪ್ರಯಾಣಿಕರ ಸಾವು

ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಮೃತಪಟ್ಟ ದಾರುಣ ಘಟನೆ ತೆಲಂಗಾಣದ ಕೊಂಡಗಟ್ಟು ಜಗತೈಲ್ ಬಳಿ ಸಂಭವಿಸಿದೆ.

ಚಕ್ರ ಕಳಚಿದ್ದರಿಂದ ಚಾಲಕ ಬಸ್ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಬಸ್ ಸಮೀಪದ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯವರು ಮಹಿಳೆಯರಾಗಿದ್ದಾರೆ.

ದುರ್ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಬಸ್ ದುರಂತಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.