Top

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ಗೆ 2 ರೂ. ಇಳಿಕೆ: ಸರಕಾರ ಘೋಷಣೆ

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ಗೆ 2 ರೂ. ಇಳಿಕೆ: ಸರಕಾರ ಘೋಷಣೆ
X

ಪೆಟ್ರೋಲ್ ಮತ್ತು ಡೀಸೆಲ್ ಲೀಟರ್​ಗೆ 2 ರೂ. ಇಳಿಕೆ ಮಾಡಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ಕಲಬುರಗಿಯಲ್ಲಿ ಸೋಮವಾರ ನಡೆದ ಹೈದರಾಬಾದ್​- ಕರ್ನಾಟಕ ವಿಮೋಚನಾ ದಿನಾಚರಣೆ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡುವ ಮೂಲಕ ರಾಜ್ಯದ ಜನತೆಗೆ ದಸರಾ ಕೊಡುಗೆ ನೀಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆ ಮೆಟ್ಟಕ್ಕೆ ಏರಿತ್ತು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳು ಭಾರತ್ ಬಂದ್​ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜಸ್ಥಾನ, ಕೇರಳ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯಗಳು ಬೆಲೆ ಇಳಿಕೆ ಘೋಷಿಸಿದ್ದವು.

ಇದೀಗ ರಾಜ್ಯ ಸರಕಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್​ಗೆ 2 ರೂ. ದರ ಇಳಿಕೆ ಮಾಡಿದೆ. ಸರಕಾರ ರಾತ್ರಿಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಕಲಬುರಗಿಯಲ್ಲಿ ಈ ಬಗ್ಗೆ ಕುಮಾರಸ್ವಾಮಿ ಘೋಷಣೆ ಮಾಡಿದರು.

Next Story

RELATED STORIES