Top

ರಾಜಕೀಯ ದ್ವೇಷ: ಅಪಾಯದಲ್ಲಿ ಅಮಾಯಕ ಮಕ್ಕಳ ಜೀವ

ರಾಜಕೀಯ ದ್ವೇಷ: ಅಪಾಯದಲ್ಲಿ ಅಮಾಯಕ ಮಕ್ಕಳ ಜೀವ
X

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಕುಡಿಯುವ ಹಾಲಿಗೆ ಯೂರಿಯಾ ಮಿಕ್ಸ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಪಕ್ಕದ ಖಾಸಗಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗಿತ್ತು. ಈ ಕಾರಣಕ್ಕಾಗಿ ತಮ್ಮ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾದ ಕಾರಣ, ಸರ್ಕಾರಿ ಶಾಲೆ ಮಕ್ಕಳ ಸಂಖ್ಯೆ ಕಡಿಮೆಗೊಳಿಸುವ ಸಲುವಾಗಿ ಮಕ್ಕಳು ಕುಡಿಯುವ ಹಾಲಿಗೆ ಯೂರಿಯಾ ಮಿಕ್ಸ್ ಮಾಡಲಾಗಿದೆ.

ಮುಖ್ಯೋಪಾಧ್ಯಾಯರು ಮತ್ತು ಸಹ ಸಿಬ್ಬಂದಿಗಳ ಕಿತ್ತಾಟಕ್ಕೆ, ರಾಜಕೀಯ ದ್ವೇಷಕ್ಕೆ ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಸತ್ಯ ಬಹಿರಂಗವಾಗುತ್ತಿದ್ದಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸರಿಂದ ವಿಚಾರಣೆ ನಡೆಸಿ, ಪ್ರಮುಖ ಆರೋಪಿಯಾದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಬಂಧಿಸಲಾಗಿದೆ.

ಇನ್ನು ಈ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಲ್ಲಿದ್ದು, ರಾಜಕೀಯ ಕೆಸರೆರೆಚಾಟಕ್ಕೆ ಮಕ್ಕಳು ಪರದಾಡುತ್ತಿದ್ದಾರೆ.

Next Story

RELATED STORIES