Top

ಇಂದು ಹುಟ್ಟಿದ ಮಕ್ಕಳಿಗೆ ಬಿಜೆಪಿ ಕೊಟ್ಟ ಗಿಫ್ಟ್ ಏನು ಗೊತ್ತಾ?

ಚೆನ್ನೈ: ಇಂದು ಪ್ರಧಾನಿ ನರೇಂದ್ರ ಮೋದಿ ಬರ್ತ್‌ಡೇ ಹಿನ್ನೆಲೆ, ತಮಿಳುನಾಡಿನಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಹುಟ್ಟಿದ ಮಕ್ಕಳಿಗೆ ಚಿನ್ನದ ಉಂಗುರವನ್ನ ಗಿಫ್ಟ್ ಮಾಡಿದ್ದಾರೆ.

ಚೆನ್ನೈನಲ್ಲಿ ಬಿಜೆಪಿ ಮುಖಂಡನಾದ ತಮಿಳಿಸಾಯಿ ಸುಂದರನ್ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಚಿನ್ನದ ಉಂಗುರ ವಿತರಿಸಿದ್ದಾರೆ.

ತಮಿಳುನಾಡಿನ ಬಿಜೆಪಿ ಕಾರ್ಯಕರ್ತರು ಟ್ವೀಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ಈ ಹಿಂದೆ ಎಐಎಡಿಎಂಕೆ ಕಾರ್ಯಕರ್ತರು ಕೂಡ, ದಿ. ಜಯಲಲಿತಾ ಹುಟ್ಟುಹಬ್ಬದ ದಿನ, ಅಂದು ಹುಟ್ಟಿದ್ದ 7 ಮಂದಿ ಮಕ್ಕಳಿಗೆ ಚಿನ್ನದ ಉಂಗುರವನ್ನು ನೀಡಿದ್ದರು.

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು 68ನೇ ವಸಂತಕ್ಕೆ ಕಾಲಿರಿಸಿದ್ದಾರೆ. ವಾರಣಾಸಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮೋದಿ, ಕಾಶಿ ವಿಶ್ವನಾಥನ ದರ್ಶನ ಪಡೆದರು.

ಅಲ್ಲದೇ ತಮ್ಮ ಜೀವನಾಧಾರಿತ ಸಿನಿಮಾ ಚಲೋ ಜೀತೆ ಹೈ ವೀಕ್ಷಿಸಿದರು.ಇಂದು ಪ್ರಧಾನಿ ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಕೆಲವು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ.

Next Story

RELATED STORIES