Top

ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೆನ್ ರಾಜೀನಾಮೆ?

ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೆನ್ ರಾಜೀನಾಮೆ?
X

ಆಮ್ ಆದ್ಮಿ ಪಕ್ಷದ ಜೊತೆಗಿನ ಹೊಂದಾಣಿಕೆ ಕೊರತೆ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಅಜಯ್ ಮಾಕೆನ್ ದೆಹಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಕೆಲಕಾಲ ಗೊಂದಲ ಸೃಷ್ಟಿಸಿತು.

ಅಜಯ್ ಮಾಕೆನ್ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್, ಅನಾರೋಗ್ಯದ ಕಾರಣ ತಾತ್ಕಾಲಿಕವಾಗಿ ತಮ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿಕೆ ನೀಡಿತು.

ಅನಾರೋಗ್ಯದ ಕಾರಣ 54 ವರ್ಷದ ಮಾಕೆನ್ ವಿದೇಶಕ್ಕೆ ತೆರಳಲಿದ್ದಾರೆ. ಆದ್ದರಿಂದ ತಾತ್ಕಾಲಿಕವಾಗಿ ಅಧ್ಯಕ್ಷ ಸ್ಥಾನದಿಂದ ದೂರ ಉಳಿಯಲಿದ್ದಾರೆ. ಸೆಪ್ಟೆಂಬರ್ 23ಕ್ಕೆ ಹಿಂತಿರುಗಲಿದ್ದಾರೆ. ರಾಜೀನಾಮೆ ಸುದ್ದಿ ಸುಳ್ಳು ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದೆ.

ಮಾಕೆನ್ ಅನಾರೋಗ್ಯದಿಂದ ಬಳಲುತ್ತಿದ್ದು, ವಿದೇಶದಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಅಗತ್ಯ ಬಿದ್ದರೆ ಚಿಕಿತ್ಸೆ ಪಡೆಯಲಿದ್ದಾರೆ. ಆದರೂ ಅವರು ಮುಂದಿನ ವಾರ ಹಿಂತಿರುಗಲಿದ್ದು, ಅವರ ಆರೋಗ್ಯ ಸ್ಥಿತಿ ತಿಳಿದ ನಂತರ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಕಾಂಗ್ರೆಸ್ ವಿವರಣೆ ನೀಡಿದೆ.

Next Story

RELATED STORIES