Top

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸರ್ಕಾರಕ್ಕೆ ಹಸ್ತಾಂತರ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸರ್ಕಾರಕ್ಕೆ ಹಸ್ತಾಂತರ
X

ಉತ್ತರಕನ್ನಡ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಇಂದು ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿದೆ.

ಇಷ್ಟು ದಿನ ಮಹಾಬಲೇಶ್ವರ ದೇವಸ್ಥಾನ ಶಿವಮೊಗ್ಗ ಜಿಲ್ಲೆಯ ಹೊಸನಗರದ ರಾಮಚಂದ್ರಾಪುರ ಮಠದ ಆಡಳಿತದಲ್ಲಿತ್ತು, ಆದರೆ 2008ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಠಕ್ಕೆ ಆಡಳಿತ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಿಂದಿನಿಂದ ಪೂಜಾ ಕಾರ್ಯ ಮಾಡುತ್ತಿದ್ದ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಗೋಕರ್ಣ ಹಿತರಕ್ಷಣಾ ವೇದಿಕೆ ಮೂಲಕ ನ್ಯಾಯಾಲಯದ ಮೊರೆ ಹೋಗಿದ್ದರು.

ಕಳೆದ ಆಗಸ್ಟ್ 10ರಂದು ದೇವಸ್ಥಾನ ಸರ್ಕಾರದ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆಡಳಿತ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗುತ್ತಿದೆ.

ಹಸ್ತಾಂತರ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಶ್ ಹಿತ್ನಾಲ್, ಕುಮಟಾ ಉಪವಿಭಾಗಾಧಿಕಾರಿ ಲಕ್ಷ್ಮಿ ಪ್ರಿಯ, ಮುಜರಾಯಿ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ‌ ಆಗಮಿಸಿದ್ದರು.

ಇವರ ಸಮ್ಮುಖದಲ್ಲಿ ಮಠದ ಆಡಳಿತಾಧಿಕಾರಿ ಜಿ.ಕೆ.ಹೆಗಡೆ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಗೆ ದೇವಸ್ಥಾನ ಸ್ಥಳಾಂತರ ಮಾಡಿದರು. ಇನ್ನು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇನ್ನು ಸರ್ಕಾರದ ನಿರ್ಧಾರಕ್ಕೆ ಮಠದ ವಕೀಲರು ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪಿಗೆ ವಿರೋಧವಾಗಿ ಹಸ್ತಾಂತರ ಎಂದು ಆರೋಪ ಮಾಡಿದ್ದು, ಹಸ್ತಾಂತರ ಮಾಡಿಕೊಂಡ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಮಠದ ಪರ ವಕೀಲ ‌ಶಂಭುಶರ್ಮ ಹೇಳಿಕೆ ನೀಡಿದ್ದಾರೆ.

Next Story

RELATED STORIES