Top

ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
X

ಸಾಲದ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಡ್ಯದಲ್ಲಿ ಶನಿವಾರ ಸಂಭವಿಸಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದ ನಂದೀಶ್ (35), ಪತ್ನಿ ಕೋಮಲಾ (28), ಚಂದನ್ (10) ಮತ್ತು ಮನು (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಮಕ್ಕಳಿಗೆ ವಿಷ ಉಣಿಸಿದ ಬಳಿಕ ತಾವು ವಿಷ ಕುಡಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ 5 ಲಕ್ಷ ರೂ. ಸಾಲ ಮಾಡಿದ್ದು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ನಂದೀಶ್ ಎರಡು ಬಾರಿ ಜನತಾ ದರ್ಶನಕ್ಕೆ ಭೇಟಿ ನೀಡಿ ಸಾಲದ ಬಾಧೆ ಬಗ್ಗೆ ಸಿಎಂ ಬಳಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಇದರಿಂದ ಮನನೊಂದು ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Next Story

RELATED STORIES