Top

ನಟ ದರ್ಶನ್ ಆರೋಗ್ಯದಲ್ಲಿ ಚೇತರಿಕೆ

ನಟ ದರ್ಶನ್ ಆರೋಗ್ಯದಲ್ಲಿ ಚೇತರಿಕೆ
X

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಮುಂದುವರೆದಿದೆ.

2ನೇ ದಿನವು ದರ್ಶನ್, ದೇವರಾಜ್, ಪ್ರಜ್ವಲ್‌, ಅಂತೋನಿಗೆ ಚಿಕಿತ್ಸೆ ಮುಂದುವರೆದಿದ್ದು, ನಾಲ್ವರನ್ನು ಸ್ಪೆಷಲ್ ವಾರ್ಡ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದು, ದರ್ಶನ್ ಇನ್ನು ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ.

ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ದರ್ಶನ್‌ಗೆ ಚಿಕಿತ್ಸೆ ನೀಡಲು ತೊಂದರೆಯಾಗುತ್ತದೆಂಬ ಕಾರಣಕ್ಕೆ, ಅಭಿಮಾನಿಗಳಿಗೆ ಆಸ್ಪತ್ರೆಯ ಒಳಗೆ ಬಿಡುತ್ತಿಲ್ಲ. ಇನ್ನು ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Next Story

RELATED STORIES