ಸರ್ಕಾರದಿಂದ 141 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ ರದ್ದು!
TV5 Kannada25 Sep 2018 4:30 PM GMT
ಬೆಂಗಳೂರು : ಕಾಂಗ್ರೆಸ್ ಶಾಸಕರ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ 141 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆಗೊಳಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದಾರೆ.
ಈ ವರ್ಗಾವಣೆಯಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಸಿಎಂ ವಿರುದ್ಧ ಕೈ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ನೇರವಾಗಿ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಇನ್ಸ್ಪೆಕ್ಟರ್ ವರ್ಗಾವಣೆಯನ್ನು ಸಿಎಂ ರದ್ದುಗೊಳಿಸಿದ್ದಾರೆ. ಅಲ್ಲದೇ, ರಿಲೀವ್ ಮಾಡದಂತೆ ಡಿಜಿಪಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಕೈ ಶಾಸಕರ ಅಸಮಾಧಾನ ಸೇರಿದಂತೆ ವಿವಿಧ ಘಟನೆಯಿಂದಾಗಿ, ಸಿಎಂ 141 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದಾರೆ.
ನಿನ್ನೆ 141 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಿ ಆದೇಶವನ್ನು, ಇಂದು ಸರ್ಕಾರವೇ ರದ್ದುಗೊಳಿಸಿದೆ.
ಈ ಮೂಲಕ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ಕೈ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎನ್ನಲಾಗಿದೆ.
- cancelled police inspector transfes kannada news today karnataka news today Karnataka Police latest karnataka news police inspector transfer prevent 141 police inspector transfer topnews tv5 kannada tv5 kannada live tv5 kannada news tv5 live ಪೊಲೀಸ್ ಇನ್ಸ್ಪೆಕ್ಟರ್ ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ ವರ್ಗಾವಣೆ ರದ್ದು
Next Story