Top

ರಮ್ಯಾ ವಿವಾದಾತ್ಮಕ ಟ್ವೀಟ್​: ಉತ್ತರ ಪ್ರದೇಶದಲ್ಲಿ ಕೇಸು

ರಮ್ಯಾ ವಿವಾದಾತ್ಮಕ ಟ್ವೀಟ್​: ಉತ್ತರ ಪ್ರದೇಶದಲ್ಲಿ ಕೇಸು
X

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸು ದಾಖಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೊವನ್ನು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಲಖನೌ ಮೂಲದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಸಯ್ಯದ್ ರಿಜ್ವಾನ್ ಅಹ್ಮದ್ ಗೊಮ್ಟಿನಗರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದರು.

ಮಾಹಿತಿ ತಂತ್ರಜ್ಞಾನ ಕಾಯ್ದೆ 2008ರ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 124 ಎ (ದೇಶದ್ರೋಹ) ಅಡಿಯಲ್ಲಿ ರಮ್ಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ರಮ್ಯಾ ಇನ್ನಷ್ಟೆ ಪ್ರತಿಕ್ರಿಯೆ ನೀಡಬೇಕಿದೆ.

Next Story

RELATED STORIES