Top

6 ದಿನಗಳ ಚಿಕಿತ್ಸೆ ನಂತರ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್​

6 ದಿನಗಳ ಚಿಕಿತ್ಸೆ ನಂತರ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್​
X

ಮೈಸೂರಿನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಲಗೈಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ 6 ದಿನಗಳ ಚಿಕಿತ್ಸೆ ನಂತರ ಡಿಸ್ಚಾರ್ಜ್​ ಆಗಿದ್ದಾರೆ.

ಕಳೆದ ವಾರ ಮೈಸೂರಿನ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟರಾದ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ಗಾಯಗೊಂಡು ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಸಣ್ಣಪುಟ್ಟ ಗಾಯ ಮಾಡಿಕೊಂಡಿದ್ದ ದೇವರಾಜ್ ಮತ್ತು ಪ್ರಜ್ವಲ್ ಎರಡು ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿದ್ದರು. ಶನಿವಾರ ಮಧ್ಯಾಹ್ನ ದರ್ಶನ್ ಡಿಸ್ಜಾರ್ಜ್ ಆಗಿದ್ದು, ಕೆಲವು ದಿನಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಅಪಘಾತದಲ್ಲಿ ಬಲಗೈಯಲ್ಲಿ ಮೂಳೆ ಮುರಿದಿದ್ದರಿಂದ ರಾಡ್ ಅಳವಡಿಸಲಾಗಿದ್ದು, ಸುಮಾರು ಒಂದು ತಿಂಗಳ ಕಾಲ ಶೂಟಿಂಗ್​ನಿಂದ ದೂರ ಉಳಿಯುವ ಸಾಧ್ಯತೆ ಇದೆ.

Next Story

RELATED STORIES