Top

ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸ್ಥಾನಕ್ಕೆ ರಮ್ಯಾ ರಾಜೀನಾಮೆ?

ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸ್ಥಾನಕ್ಕೆ ರಮ್ಯಾ ರಾಜೀನಾಮೆ?
X

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಕಾಂಗ್ರೆಸ್ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ನಾನು ರಜೆಯಲ್ಲಿದ್ದೇನೆ. ಶೀಘ್ರ ಮರಳುತ್ತೇನೆ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಸಿನಿಮಾ ನಟನಾ ರಂಗದಿಂದ ದಿಢೀರ್ ರಾಜಕಾರಣಕ್ಕೆ ಧುಮುಕ್ಕಿದ್ದ ರಮ್ಯಾ, ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಸೋಲುಂಡಿದ್ದರು. ನಂತರದ ದಿನದಗಳಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ರಮ್ಯಾ, ಕ್ಷೇತ್ರದಲ್ಲಿ ಗಮನ ಕೇಂದ್ರೀಕರಿಸುವ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಆದ ನಂತರ ರಮ್ಯಾ ಹಲವಾರು ವಿವಾದಾತ್ಮಕ ಟ್ವೀಟ್ ಮಾಡಿದ್ದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು.

ಮೋದಿ ಮೇಣದ ಪ್ರತಿಮೆ ಮೇಲೆ ಚೋರ್ ಎಂದು ಬರೆಸಿದ ಟ್ವೀಟ್ ಮಾಡಿದ್ದರು. ಈ ಬಗ್ಗೆ ಉತ್ತರ ಪ್ರದೇಶದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಅಲ್ಲದೇ ಆಮೀರ್ ಖಾನ್ ಅವರ ಧಗ್ ಆಫ್ ಹಿಂದುಸ್ತಾನಿ ಚಿತ್ರದಲ್ಲಿ ಟ್ರೇಲರ್ ದೃಶ್ಯವನ್ನು ಮೋದಿಗೆ ಹೋಲಿಸಿ ಧೋಖಾ ಮೇರಾ ಸ್ವಭಾವ್ ಹೆ (ಮೋಸ ಮಾಡುವುದು ನನ್ನ ಸ್ವಭಾವ) ಎಂದು ಟ್ವೀಟ್ ಮಾಡಿದ್ದರು.

Next Story

RELATED STORIES