Top

'ನಾನು ಸಹ ಮದಕರಿ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದೇನೆ'

ನಾನು ಸಹ ಮದಕರಿ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದೇನೆ
X

ಮದಕರಿ ನಾಯಕ ಸಿನಿಮಾ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದು, ಟ್ವೀಟ್ ಮಾಡುವುದರ ಮೂಲಕ ತಾವೂ ಕೂಡ ಮದಕರಿ ನಾಯಕನ ಪಾತ್ರದಲ್ಲಿ ನಟಿಸುವುದಾಗಿ ಹೇಳಿದ್ದಾರೆ.

ಈಗಾಗಲೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಮದಕರಿ ನಾಯಕ ಸಿನಿಮಾ ಅನೌನ್ಸ್ ಮಾಡಿದ್ದಾರೆ.

ರಾಕ್ಲೈನ್ ನಿರ್ಮಾಣದ ಚಿತ್ರದಲ್ಲಿ ದರ್ಶನ್ ಮದಕರಿ ನಾಯಕನ ಪಾತ್ರ ಮಾಡಲಿದ್ದು, ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಲಿದ್ದಾರೆ.

ಇದೀಗ ಸುದೀಪ್ ಸಹ ಮದಕರಿ ನಾಯಕನ ಜೀವನ ಚರಿತ್ರೆ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿದ್ದು, ಇದು ನನ್ನ ಬಹಳ ವರ್ಷಗಳ ಕನಸು ಎಂದಿದ್ದಾರೆ.

ಒಂದೇ ಕಥೆಯಲ್ಲಿ ಎರಡು ಸಿನಿಮಾ ಮಾಡಬಾರದು ಅಂತೇನು ಇಲ್ಲ. ಅವರ ಪಾತ್ರವನ್ನು ನಾನು ಗೌರವಿಸುತ್ತೇನೆ. ನಾನು ಸಹ ಮದಕರಿ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

Next Story

RELATED STORIES