Top

ರಾಜ್ಯದ 3 ಲೋಕಸಭೆ, 2 ವಿಧಾನಸಭೆ ಉಪಚುನಾವಣೆಗೆ ದಿನಾಂಕ ನಿಗದಿ

ರಾಜ್ಯದ 3 ಲೋಕಸಭೆ, 2 ವಿಧಾನಸಭೆ ಉಪಚುನಾವಣೆಗೆ ದಿನಾಂಕ ನಿಗದಿ
X

ಕರ್ನಾಟಕದ 3 ಲೋಕಸಭೆ ಹಾಗೂ 2 ವಿಧಾನಸಭೆ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದ್ದು, ನವೆಂಬರ್ 3 ರಂದು ನಡೆಯಲಿದ್ದು, ಮೂರೇ ದಿನಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾಧಿಕಾರಿ ಓ.ಪಿ. ರಾವತ್ ಘೋಷಿಸಿದ್ದಾರೆ.

ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯದ ಲೋಕಸಭಾ ಸ್ಥಾನಗಳಿಗೆ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಚುನಾವಣೆಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ. ನವೆಂಬರ್ 6ಕ್ಕೆ ಫಲಿತಾಂಶ ಹೊರಬೀಳಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಜೆಡಿಎಸ್​ನ ಪುಟ್ಟರಾಜು, ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಬಳ್ಳಾರಿಯ ಶ್ರೀರಾಮುಲು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳು ತೆರವಾಗಿದ್ದವು.

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಜಯಿಸಿದ್ದರಿಂದ ರಾಮನಗರ ಕ್ಷೇತ್ರಕ್ಕೆ ರಾಜೇನಾಮೆ ನೀಡಿದ್ದರು. ಜಮಖಂಡಿ ಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡ ಅಪಘಾತದಲ್ಲಿ ಮೃತಪಟ್ಟಿದ್ದರು. ಆದ್ದರಿಂದ ಈ ಎರಡೂ ಕ್ಷೇತ್ರಗಳು ತೆರವಾಗಿದ್ದಕ್ಕೆ ಉಪ ಚುನಾವಣೆ ದಿನಾಂಕ ಪ್ರಕಟಿಸಲಾಗಿದೆ.

Next Story

RELATED STORIES