Top

ರೈತರ ಸಾಲಮನ್ನಾ ಆಯ್ತು, ಇದೀಗ ಇವರ ಸಾಲಮನ್ನಾ..!

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಸಖತ್ ಸರ್ಕಸ್ ಮಾಡ್ತಾ ಇದೆ. ಈ ಮಧ್ಯೆ ಇನ್ನೊಂದು ಹೊಸ ನ್ಯೂಸ್ ಹೊರಬಿದ್ದಿದ್ದು, ರೈತರ ಸಾಲಮನ್ನಾ ಮಾಡಿದ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಮಾಡಿದ ಶೈಕ್ಷಣಿಕ ಸಾಲಮನ್ನಾ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಆದ್ರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ, ಎಲ್ಲ ಜಿಲ್ಲೆಗಳ ಜಂಟಿ ಹಾಗೂ ಉಪನಿರ್ದೇಶಕರಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳನ್ನೊಳಗೊಂಡಂತೆ ಎಲ್ಲ ಬ್ಯಾಂಕ್‌ಗಳಿಂದ ಪಡೆದಿರುವ ಶೈಕ್ಷಣಿಕ ಸಾಲದ ಮಾಹಿತಿ ಪಡೆಯುವಂತೆ ಸೂಚಿಸಿದೆ.

ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಜಿಲ್ಲಾ ಉಪನಿರ್ದೇಶಕರಿಗೆ ವಿದ್ಯಾರ್ಥಿಗಳ ಹೆಸರು, ಕೋರ್ಸ್ ವಿವರ, ಬ್ಯಾಂಕ್ ಮತ್ತು ಸಾಲದ ಮೊತ್ತ, ಬಡ್ಡಿ ಮೊತ್ತ ಹಾಗೂ ಒಟ್ಟು ಮೊತ್ತದ ಮಾಹಿತಿ‌ ನೀಡುವಂತೆ ಸೂಚನೆ ನೀಡಿದೆ.

Next Story

RELATED STORIES