ಗ್ಯಾಸ್ ಪೈಪ್ಲೈನ್ ಸಿಡಿದು 9 ಮಂದಿ ಸಾವು

X
TV5 Kannada9 Oct 2018 9:55 AM GMT
ಬಿಲಾಯಿ ಸ್ಟೀಲ್ ಪ್ಲಾಂಟ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಜೀವ ದಹನಗೊಂಡು, 12 ಮಂದಿ ಗಾಯಗೊಂಡ ದಾರುಣ ಘಟನೆ ಛತ್ತೀಸ್ಗಢದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ರಾಜಧಾನಿ ಜೈಪುರದಿಂದ 30 ಕಿ.ಮೀ. ದೂರದಲ್ಲಿರುವ ಬಿಲಾಯಿ ಗ್ರಾಮದಲ್ಲಿರುವ ಸ್ಟೀಲ್ ಪ್ಲಾಂಟ್ನ ಓವನ್ ವಿಭಾಗದಲ್ಲಿ ಸ್ಫೋಟ ಸಂಭವಿಸಿತು.
ಸ್ಫೋಟ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಫೋಟದ ತೀವ್ರತೆಗೆ 6 ಮಂದಿ ಸಜೀವದಹನಗೊಂಡಿದ್ದು, 14 ಮಂದಿ ಸುಟ್ಟ ಗಾಯದಿಂದ ಬಳಲುತ್ತಿದ್ದಾರೆ. ಗಾಯಗೊಂಡವರಲ್ಲಿ ಬಹುತೇಕ ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬ್ಯಾಟರಿ ಕಾಂಪ್ಲೆಕ್ಸ್ನಲ್ಲಿ ಆರಂಭದಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಹೇಳಲಾಗುತ್ತಿದೆ.
Next Story