Top

ಎಲ್ಲಾ ಜಿಲ್ಲೆಗಳಲ್ಲಿ ಗಾಂಧೀ ಭವನ ನಿರ್ಮಿಸಲು ಸಿಎಂ ಸೂಚನೆ

ಎಲ್ಲಾ ಜಿಲ್ಲೆಗಳಲ್ಲಿ ಗಾಂಧೀ ಭವನ ನಿರ್ಮಿಸಲು ಸಿಎಂ ಸೂಚನೆ
X

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನಗಳನ್ನು ಆದ್ಯತೆಯ ಮೇರೆಗೆ ನಿರ್ಮಿಸುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧೀಜಿಯವರ 150 ನೆ ಜನ್ಮ ದಿನಾಚರಣೆ ಕುರಿತು ಚರ್ಚಿಸಲು ಕರೆದಿದ್ದ ಉನ್ನತ ಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವ್ರು, ಗಾಂಧಿ ಭವನಕ್ಕೆ 21 ಜಿಲ್ಲೆಗಳಲ್ಲಿ ನಿವೇಶನ ಲಭ್ಯವಿದೆ. ಉಳಿದ ಜಿಲ್ಲೆಗಳಲ್ಲಿ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಈ ಕಾರ್ಯಕ್ರಮವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಾಂಧಿ ಭವನ ನಿರ್ಮಿಸಿದ ನಂತರ ಅಲ್ಲಿ ಗಾಂಧಿ ಚಿಂತನೆ, ಆಶಯಗಳಿಗೆ ಅನುಗುಣವಾಗಿ ನಿರಂತರ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಹಾಗೂ ಗಾಂಧಿಭವನ ನಿರ್ವಹಣೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಬಾರಿ ಮಹಾತ್ಮಾ ಗಾಂಧಿಯವರನ್ನೇ ಪ್ರಮುಖ ವಿಷಯವಾಗಿಟ್ಟುಕೊಂಡು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವಂತೆ ತಿಳಿಸಿದರು. ಅಲ್ಲದೆ, ಭಾರತ ಸರ್ಕಾರವು ಗಣರಾಜ್ಯೋತ್ಸವದ ಸ್ತಬ್ಧ ಚಿತ್ರಕ್ಕೆ ಎಲ್ಲ ರಾಜ್ಯಗಳೂ ಗಾಂಧೀಜಿ ಕುರಿತ ಸ್ತಬ್ಧಚಿತ್ರವನ್ನೇ ಪ್ರಸ್ತುತಪಡಿಸುವಂತೆ ಸೂಚಿಸಿದೆ. ಸಭೆಯಲ್ಲಿ ಸಮಿತಿಯ ಸದಸ್ಯರಾಗಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿ, ಚನ್ನಮ್ಮಾ ಹಳ್ಳಿಕೇರಿ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ, ಮತ್ತಿತರರು ಪಾಲ್ಗೊಂಡು ಹಲವಾರು ಸಲಹೆ ನೀಡಿದರು.

Next Story

RELATED STORIES