Top

ಮುತ್ತಿನನಗರಿಯಲ್ಲಿ ಕೊಹ್ಲಿ-ಅನುಷ್ಕಾ ಜೋಡಿ

ಮುತ್ತಿನನಗರಿಯಲ್ಲಿ ಕೊಹ್ಲಿ-ಅನುಷ್ಕಾ ಜೋಡಿ
X

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮ ಪ್ರಸ್ತುತ ದೇಶದಲ್ಲಿ ಭಾರೀ ಚರ್ಚೆಯಲ್ಲಿರುವ ಜೋಡಿ. ಈ ಜೋಡಿ ವಿರಾಮದ ದಿನಗಳನ್ನು ಕಳೆಯುತ್ತಿದ್ದಾರೆ. ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ತೆಗೆದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಗೆದ್ದು ಎರಡನೇ ಟೆಸ್ಟ್​ಗೆ ಮುನ್ನ ವಿಶ್ರಾಂತಿಯಲ್ಲಿರುವ ಕೊಹ್ಲಿ ಮತ್ತು ಚಿತ್ರಗಳಿಂದ ಕೆಲಕಾಲ ದೂರ ಉಳಿದಿರುವ ಅನುಷ್ಕಾ ಶರ್ಮ ಹೈದರಾಬಾದ್​ಗೆ ಇತ್ತೀಚೆಗೆ ಭೇಟಿ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ತೆಗೆಸಿಕೊಂಡ ಫೋಟೋವನ್ನು ಇನ್ ಸ್ಟಾಗ್ರಾಂ ಹಾಗೂ ಟ್ವೀಟರ್​ನಲ್ಲಿ ಹಾಕಿಕೊಂಡಿದ್ದಾರೆ.

ಒಂದೇ ಬಣ್ಣದ ಉಡುಗೆ ತೊಟ್ಟಿರುವ ಅನುಷ್ಕಾ ಮತ್ತು ಬಿಳಿ ಟೀ ಶರ್ಟ್​ ಹಾಗೂ ಕಪ್ಪು ಪ್ಯಾಂಟ್ ಧರಿಸಿರುವ ವಿರಾಟ್ ಕೊಹ್ಲಿ ಇಬ್ಬರೂ ಒಬ್ಬರನೊಬ್ಬರ ಕೈ ಹಿಡಿದುಕೊಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

Next Story

RELATED STORIES