Top

ಧೋನಿ, ಕೊಹ್ಲಿಯದ್ದೇ ಆಯ್ಕೆದಾರರ 'ಏಕ' ಚಿಂತೆ

ಧೋನಿ, ಕೊಹ್ಲಿಯದ್ದೇ ಆಯ್ಕೆದಾರರ ಏಕ ಚಿಂತೆ
X

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಆಟಗಾರರು ಸಜ್ಜಾಗುತ್ತಿದ್ದರೆ, ಬಿಸಿಸಿಐ ಆಯ್ಕೆ ಸಮಿತಿ ತಂಡದ ಆಯ್ಕೆಗೆ ಬಗ್ಗೆ ತಲೆ ಕೆಡಿಸಿಕೊಂಡಿದೆ. ಅದರಲ್ಲೂ ಹಿರಿಯ ಅನುಭವಿ ಮಹೇಂದ್ರ ಸಿಂಗ್ ಧೋನಿ ಅವರ ಕಳಪೆ ಪ್ರದರ್ಶನ ಹಾಗೂ ವಿರಾಟ್ ಕೊಹ್ಲಿ ಮೇಲಿನ ಒತ್ತಡವನ್ನು ನಿಭಾಯಿಸಬೇಕಾದ ಒತ್ತಡಕ್ಕೆ ಸಿಲುಕಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಗೆ ಎಂಎಸ್​ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡ ಪ್ರಕಟಿಸಲಿದೆ.

ಆಯ್ಕೆ ಮಂಡಳಿ ಇಡೀ ಸರಣಿಗೆ ತಂಡವನ್ನ ಪ್ರಕಟಿಸುವುದೇ ಅಥವಾ ಮೊದಲು ಮೂರು ಪಂದ್ಯಗಳಿಗೆ ಮಾತ್ರ ತಂಡ ಪ್ರಕಟಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಏಷ್ಯಾಕಪ್ ನಲ್ಲಿ ಬ್ಯಾಟಿಂಗ್ ನಲ್ಲಿ ಸಂಪೂರ್ಣ ವಿಫಲರಾಗಿದ್ದರು. ಮತ್ತೊಬ್ಬ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಕೂಡ ವೈಫಲ್ಯ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ನಲ್ಲಿ ಮಿಂಚಿದ ಯುವ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಮಣೆ ಹಾಕುವ ಸಾಧ್ಯತೆ ಇದೆ.

ಧೋನಿ ಅವರು ವಿಶ್ವಕಪ್​ವರೆಗೂ ಆಡಬೇಕು ಎಂಬುದು ಬಯಸಿದ್ದಾರೆ. ಆದರೆ ಅದಕ್ಕೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ. ಒಂದು ವೇಳೆ ಧೋನಿಗೆ ಅವಕಾಶ ನೀಡಿದರೂ ರಿಷಭ್ ಪಂತ್​ ಗೂ ಎರಡನೇ ಆಯ್ಕೆಯಾಗಿ ಅವಕಾಶ ನೀಡುವ ಸಾಧ್ಯತೆ ಇದೆ. ಪಂತ್​ಗೆ ಮ್ಯಾಚ್ ಫಿನಿಶರ್​ರಾಗೋ ಸಾಮರ್ಥ್ಯ ಇರೋದ್ರಿಂದ ಆರು ಅಥವಾ ಏಳನೇ ಕ್ರಮಾಂಕದಲ್ಲಿ ಆಡಬಹುದಾಗಿದೆ.

ನಾಯಕ ಕೊಹ್ಲಿ ಏಕದಿನ ಸರಣಿಯಲ್ಲಿ ಆಡುವ ಬಗ್ಗೆ ಇನ್ನೂ ಅನುಮಾನಗಳಿವೆ. ವಿಶ್ವಕಪ್ ಹಿನ್ನೆಲೆಯಲ್ಲಿ ಹಿರಿಯ ಆಟಗಾರರಿಗೆ ಹೆಚ್ಚು ವಿಶ್ರಾಂತಿ ನೀಡುವುದು ಹಾಗೂ ದೈಹಿಕವಾಗಿ ಒತ್ತಡ ಬೀಳದಂತೆ ನೋಡಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೊಹ್ಲಿಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಏಷ್ಯಾಕಪ್​ ಫೈನಲ್ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಕೇದಾರ್ ಜಾಧವ್ ತಂಡದಿಂದ ಹೊರಗುಳಿದಿದ್ದು ಯುವ ಆಟಗಾರರಿಗೆ ಅವಕಾಶ ಕೊಡಬೇಕಾಗಿದೆ.

ಸ್ಫೋಟಕ ಬ್ಯಾಟ್ಸ್ ಮನ್ ಅಂಬಟಿ ರಾಯ್ಡು ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಜಸ್​ಪ್ರೀತ್ ಬೂಮ್ರಾ ತಂಡದಲ್ಲಿ ಉಳಿದುಕೊಳ್ಳುವ ಸಾಧ್ಯತೆ ಇದೆ.

Next Story

RELATED STORIES