Top

ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಿಲ್ಲ: ಕಿಮ್ಮನೆ

ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಿಲ್ಲ: ಕಿಮ್ಮನೆ
X

ಶಿವಮೊಗ್ಗ: ಲೋಕಸಭೆ ಉಪ ಚುನಾವಣೆಯಲ್ಲಿ ಟಿಕೆಟ್ ಕೊಟ್ಟರೂ ನಾನು ಸ್ಪರ್ಧಿಸುವುದಿಲ್ಲವೆಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ್, ಲೋಕಸಭಾ ಉಪಚುನಾವಣೆಗೆ ನಾನು ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ಪಕ್ಷದ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಸ್ಫರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ಅಲ್ಲದೇ ನನ್ನ ಬಳಿ ಹಣ ಇಲ್ಲ ಎಂದು ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ.ಚುನಾವಣಾ ಖರ್ಚು- ವೆಚ್ಚ ಭರಿಸುವ ಶಕ್ತಿ ನನ್ನಲಿಲ್ಲ ಎಂದು ತಿಳಿಸಿದ್ದೇನೆ ಎಂದು ಕಿಮ್ಮನೆ ರತ್ನಾಕರ್ ಸ್ಪಷ್ಟಪಡಿಸಿದರು.

ಲೋಕಸಭಾ ಉಪಚುನಾವಣೆನೆ ಅಗತ್ಯ ಇರಲಿಲ್ಲ.ಈಗಲೂ ಅದನ್ನು ರದ್ದುಪಡಿಸುವ ಅಧಿಕಾರ ಚುನಾವಣಾ ಆಯೋಗಕ್ಕಿದೆ. ಈ ಬಗ್ಗೆ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದರೆ ಪತ್ರಕ್ಕೆ ಇನ್ನೂ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೇ ಇದಕ್ಕೆ ಕಾರಣ ಎಂದಿರುವ ಕಿಮ್ಮನೆ ರತ್ನಾಕರ್, ಕೇವಲ ಭಾಷಣದಿಂದ ದೇಶವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಲೂಟಿಕೋರರು ತಪ್ಪಿಸಿಕೊಂಡು ದೇಶಬಿಟ್ಟು ಹೋಗಿದ್ದಾರೆ. ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Next Story

RELATED STORIES