ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಂಧನ ವಾರೆಂಟ್

ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ವಿಶೇಷ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿದೆ.
ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಹಾಜರಾಗದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಲಯ ಶುಕ್ರವಾರ ಲಕ್ಷ್ಮಿ ಹೆಬ್ಬಾಳ್ಕರ್ಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
https://www.youtube.com/watch?v=Erkgd62o2EA
2013 ವಿಧಾನಸಭೆ ಚುನಾವಣೆ ವೇಳೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಹೆಚ್ಚು ಪ್ರಚಾರ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಬೆಳಗಾವಿ ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಲಕ್ಷ್ನಿ ಹೆಬ್ಬಾಳ್ಕರ್ ವಿರುದ್ಧ ಕೋರ್ಟ್ ಗೆ ಚಾರ್ಚ್ ಶೀಟ್ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಲಕ್ಷ್ನಿ ಹೆಬ್ಬಾಳ್ಕರ್ ವಿಚಾರಣೆ ಹಾಜರಾಗುವಂತೆ ಸಮಸ್ಸ್ ಮಾಡಲಾಗಿತ್ತು. ಅದರೆ ಎರಡು ಭಾರೀ ಕೋರ್ಟ್ ವಿಚಾರಣೆ ಸಮದರ್ಭದಲ್ಲಿಯೂ ಕೂಡ ಗೈರುಹಾಜರಾದ ಕಾರಣ ವಿಶೇಷ ಕೋಟ್ ಕೆಪಿಸಿಸಿ ಮಹಿಳ ಘಟಕ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಂಧನ ವಾರೆಂಟ್ ಜಾರಿಮಾಡಿದೆ.