ಉಪಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಲ್ಲ : HD ದೇವೇಗೌಡ

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮಂಗಳೂರಿನಿಂದ ಸ್ಪರ್ಧಿಸುತ್ತಾರೆ ಎನ್ನುವ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದ ಜಿಲ್ಲೆಯ ಅರಕಲಗೂಡಿನಲ್ಲಿ ಮಾತನಾಡಿದ ಅವರು ಕಳೆದ 5 ವರ್ಷಗಳಿಂದ ಅಭಿವೃದ್ಧಿಯಾಗಿಲ್ಲ. ಈಗಲಾದರು ಅಭಿವೃದ್ಥಿಯಾಗಲಿ ಎಂದು ಪ್ರಧಾನಿ ಮೋದಿ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ್ಯಂಗ್ಯವಾಡಿದರು.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರು ಭೇಟಿ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮಾಡಲು ಬಂದಿಲ್ಲಾ, ಬೇರೆ ಕಾರ್ಯದ ನಿಮಿತ್ತ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ ಎಂದರು.
ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ ವಿಚಾರವಾಗಿಯೂ ಮಾತನಾಡಿದ ಅವರು ಅದು ಪಕ್ಷದ ತೀರ್ಮಾನ. ಮಹೇಶ್ ರವರು ನಮ್ಮ ಜೊತೆ ಈಗಲೂ ಚೆನ್ನಾಗಿದ್ದಾರೆ. ಬಿಎಸ್ ಪಿಯವರು ಈಗಲೂ ನಮಗೆ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದರು.
ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಮನಗರಕ್ಕೆ ಅಭ್ಯರ್ಥಿ ಅಂತಿಮವಾಗಿದೆ. ಮಂಡ್ಯದಲ್ಲಿ ಸಚಿವರು ಶಾಸಕರು ಮತ್ತು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ. ಈ ಉಪಚುನಾವಣೆ ಮುಂದಿನ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲ್ಲಾ ಎಂದು ಹೇಳಿದರು.