ಸಿಡಿಲಿಗೆ ತಾಯಿ - ಮಗಳು ಬಲಿ

X
TV5 Kannada15 Oct 2018 11:29 AM GMT
ಸಿಡಿಲಿಗೆ ತಾಯಿ ಹಾಗೂ ಮಗಳು ಬಲಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಳ್ಳಿ ತಾಂಡದಲ್ಲಿ ನಡೆದಿದೆ.
ಕವಿತಾ ಬಾಯಿ (29) ಹಾಗೂ ಪುತ್ರಿ ಪಲ್ಲವಿ (11) ಮೃತಪಟ್ಟವರು. ತಾಂಡಾದ ಪಕ್ಕದಲ್ಲೇ ಇದ್ದ ಜಮೀನಿನಲ್ಲಿ ಕೆಲಸಕ್ಕೆಂದು ತೆರಳಿದ್ದರು. ಮಳೆ ಬಂದಿದ್ದರಿಂದ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಸಿಡಿಲು ಬಡಿದಿದೆ. ಪರಿಣಾಮ, ತಾಯಿ - ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹರಪ್ಪನಹಳ್ಳಿ ಠಾಣೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story